ಧರ್ಮೋಪದೇಶಕಾಂಡ 28:31

ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.

30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.

31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.

32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.

33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी