ವಿಮೋಚನಕಾಂಡ 21:6

ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 21

4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.

5ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ

6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.

7ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.

8ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.

ವಿಮೋಚನಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी