ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ