ಕೀರ್ತನೆಗಳು 68:6

ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 68

4ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.

5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.

6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.

7ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.

8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.

ಕೀರ್ತನೆಗಳು 68 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी