ಯೆರೆಮಿಯ 22:16

ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 22

14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!

15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?

16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.

17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.

18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.

ಯೆರೆಮಿಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी