ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
19ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
21ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ