ಯೆಹೆಜ್ಕೇಲನು 5:16

ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 5

14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.

15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.

16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.

17ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

ಯೆಹೆಜ್ಕೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी