ಯೆರೆಮಿಯ 48:40

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.

39ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.

40ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.

41ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.

42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी