ಪ್ರಕಟನೆ 14:16

ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 14

14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.

15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.

16ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

17ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.

18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಪ್ರಕಟನೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी