ಮತ್ತಾಯನು 6:5

ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

3ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.

4ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी