ಯೆರೆಮಿಯ 48:13

ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

11ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.

12ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.

13ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.

14ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ?

15ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी