ಎಜ್ರನು 6:9

ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ

ಸಂದರ್ಭದೊಂದಿಗೆ ಓದಿ · ಎಜ್ರನು 6

7ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.

8ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.

9ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ

10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

11ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

ಎಜ್ರನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी