ಯೆರೆಮಿಯ 26:6

ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 26

4ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ

5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ

6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.

7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.

8ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.

ಯೆರೆಮಿಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी