ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.
26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
27ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
28ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.
29ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ