ಯಾಜಕಕಾಂಡ 2:9

ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 2

7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

8ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.

9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.

10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.

11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.

ಯಾಜಕಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी