ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
10ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ