ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
4ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
5ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ