ಅಪೊಸ್ತಲರ ಕೃತ್ಯಗಳು 2:15

ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.

14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.

15ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.

16ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--

17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी