ಯೆಶಾಯ 43:19

ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 43

17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--

18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

ಯೆಶಾಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी