ಯೆಹೆಜ್ಕೇಲನು 33:28

ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

26ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?

27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.

28ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.

29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.

30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी