ಯೋಹಾನನು 14:11

ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

ಸಂದರ್ಭದೊಂದಿಗೆ ಓದಿ · ಯೋಹಾನನು 14

9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?

10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.

11ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.

ಯೋಹಾನನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी