ಧರ್ಮೋಪದೇಶಕಾಂಡ 26:10

ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ

9ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.

10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.

11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.

12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी