ಪ್ರಕಟನೆ 19:16

ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 19

14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.

15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

17ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,

18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

ಪ್ರಕಟನೆ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी