ಯೆಶಾಯ 43:22

ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

ಸಂದರ್ಭದೊಂದಿಗೆ ಓದಿ · ಯೆಶಾಯ 43

20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

22ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

ಯೆಶಾಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी