ಲೂಕನು 8:33

ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.

ಸಂದರ್ಭದೊಂದಿಗೆ ಓದಿ · ಲೂಕನು 8

31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.

32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.

33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.

34ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.

35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी