ಯೆಶಾಯ 19:15

ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 19

13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.

14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.

15ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.

16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.

17ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.

ಯೆಶಾಯ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी