ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ