ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
2ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ