೧ ಅರಸುಗಳು 10:25

ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.

24ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.

25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.

26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.

27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी