ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
18ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.
19ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ