ಮಿಕ 7:4

ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

ಸಂದರ್ಭದೊಂದಿಗೆ ಓದಿ · ಮಿಕ 7

2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.

4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.

ಮಿಕ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी