ಎಜ್ರನು 10:14

ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.

ಸಂದರ್ಭದೊಂದಿಗೆ ಓದಿ · ಎಜ್ರನು 10

12ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,

13ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.

14ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.

15ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.

16ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.

ಎಜ್ರನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी