ಪ್ರಸಂಗಿ 2:22

ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?

ಸಂದರ್ಭದೊಂದಿಗೆ ಓದಿ · ಪ್ರಸಂಗಿ 2

20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.

21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.

22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?

23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.

24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.

ಪ್ರಸಂಗಿ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी