ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
2ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
3ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ