ಆದಿಕಾಂಡ 41:41

ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.

40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.

41ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.

42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.

43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी