ಯೆಶಾಯ 47:8

ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ಸಂದರ್ಭದೊಂದಿಗೆ ಓದಿ · ಯೆಶಾಯ 47

6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.

7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.

8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.

10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.

ಯೆಶಾಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी