ಯೆಶಾಯ 44:18

ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 44

16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;

17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.

20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी