೨ ಪೂರ್ವಕಾಲವೃತ್ತಾಂತ 18:8

ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 18

6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.

7ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.

8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.

9ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.

10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.

೨ ಪೂರ್ವಕಾಲವೃತ್ತಾಂತ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी