ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
24ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
25ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
27ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ