೧ ಪೇತ್ರನು 5:4

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 5

2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

೧ ಪೇತ್ರನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी