ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
22ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ