ಯೆಹೆಜ್ಕೇಲನು 18:5

ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 18

3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.

4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.

5ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,

6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;

7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,

ಯೆಹೆಜ್ಕೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी