ಯೆಹೋಶುವ 8:16

ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.

15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.

16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.

17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.

18ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी