ವಿಮೋಚನಕಾಂಡ 13:17

ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.

16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.

17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.

18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.

19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी