ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ