ಯೆರೆಮಿಯ 26:14

ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 26

12ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.

13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.

16ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ಯೆರೆಮಿಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी