೧ ಅರಸುಗಳು 18:19

ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.

18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.

19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.

20ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್‌ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.

21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी