ಯೆರೆಮಿಯ 25:5

ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.

5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.

6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.

7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी