ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
11ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ