ಯೋಹಾನನು 13:8

ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 13

6ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.

7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.

8ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.

9ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.

10ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी